ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಕೆಲವು ಪೊಲೀಸರು ದಾಳಿ ನಡೆಸುವ ನೆಪದಲ್ಲಿ ಉದ್ಯಮಿಯೊಬ್ಬರ ಮನೆಗೆ ತೆರಳಿ 25 ಲಕ್ಷ ರೂ. ನಗದು ಮತ್ತು ಚಿನ್ನದ ವಸ್ತುಗಳನ್ನು ದೋಚಿದ್ದಾರೆ ಎನ್ನಲಾಗಿದೆ.
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಅನೀಶ್ ಸರ್ಕಾರ್ ತಿಳಿಸಿದ್ದಾರೆ. ಪೊಲೀಸರು ತಮ್ಮ ಮನೆಯಲ್ಲಿದ್ದ ಮಹಿಳೆಯರನ್ನು ಥಳಿಸಿದ್ದಾರೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಉದ್ಯಮಿ ಹೇಳಿದ್ದಾರೆ.
PublicNext
20/01/2022 07:58 am