ಸತಾರಾ(ಮಹಾರಾಷ್ಟ್ರ) ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಅರಣ್ಯ ಇಲಾಖೆ ಮಹಿಳಾ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ವಿಷಯ ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ ಹಲ್ಲೆಗೈದಾತ ಹಾಗೂ ಆತನಿಗೆ ಸಹಕರಿಸಿದ ಇನ್ನೋರ್ವ ಮಹಿಳೆಯನ್ನು ಬಂಧಿಸಿ ಕೇಸ್ ದಾಖಲಿಸಿದ್ದಾರೆ. ಈ ತರದ ಪ್ರಕರಣಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಲ್ಲೆಗೈದ ಆರೋಪಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಸತಾರಾ ಜಿಲ್ಲೆಯ ಎಸ್‌ಪಿ ಅಜಯ್‌ಕುಮಾರ್ ಬನ್ಸಲ್ ಹೇಳಿದ್ದಾರೆ.
PublicNext
20/01/2022 10:46 pm