ಬೀದರ್: ಜಿಲ್ಲೆಯ ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಲಂಚ ಪಡೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಪಿಐ ಪಿ.ಆರ್.ರಾಘವೇಂದ್ರ ವಿರುದ್ಧ ಲಂಚ ಸ್ವೀಕಾರ ಆರೋಪ ಕೇಳಿ ಬಂದಿದ್ದು, ಲಂಚ ಪಡೆಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಪಿಐ ಆ ವ್ಯಕ್ತಿಯಿಂದ ಯಾಕೆ ಲಂಚ ಪಡೆಯುತ್ತಿದ್ದಾರೆ ? ಆ ವ್ಯಕ್ತಿ ಯಾರು ಎನ್ನುವ ಕುರಿತು ತನಿಖೆಯಾಗಬೇಕಿದೆ.
ಭಾಲ್ಕಿ ನಗರ ಪೊಲೀಸ್ ಠಾಣೆ ಸಿಪಿಐ ಪಿ.ಆರ್.ರಾಘವೇಂದ್ರ ಪೊಲೀಸ್ ಸಮವಸ್ತ್ರದಲ್ಲಿ ಅಂಗಡಿಯೊಂದರ ಒಳಗೆ ಬಂದು ವ್ಯಕ್ತಿಯಿಂದ ಲಂಚ ಪಡೆದಿದ್ದಾರೆ. ಈ ಲಂಚದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಪಿಐ ರಾಘವೇಂದ್ರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕೆಲದಿನಗಳ ಹಿಂದಷ್ಟೇ ಭಾಲ್ಕಿ ನಗರಕ್ಕೆ ಸಿಪಿಐಯಾಗಿ P.R.ರಾಘವೇಂದ್ರ ವರ್ಗಾವಣೆಯಾಗಿದ್ದರು. ಸಣ್ಣಪುಟ್ಟ ವಿಷಯಕ್ಕೆ ಸಾರ್ವಜನಿಕರಿಗೆ ಕಿರುಕುಳು ಕೊಡುತ್ತಿದ್ದರು ಎಂಬ ಆರೋಪ ಸಹ ಕೇಳಿ ಬಂದಿದೆ.
PublicNext
24/01/2022 11:44 am