ಆನೇಕಲ್: ಕುಡಿದ ಅಮಲಿನಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಿದ ಘಟನೆ ಆನೇಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪುನಗರದಲ್ಲಿ ನಡೆದಿದೆ.
ತಮಿಳುನಾಡಿನ ಕಲ್ಕೆರೆ ಮೂಲದ ವಿಜಯ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ನಿನ್ನೆ ಸ್ನೇಹಿತರೊಡನೆ ಕುವೆಂಪುನಗರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಗಲಾಟೆ ಶುರುವಾಗಿದೆ.
ಗಲಾಟೆ ತಾರಕಕ್ಕೇರಿ ಸ್ನೇಹಿತರಿಂದಲೇ ವಿಜಯ್ ಕುಮಾರ್‌ಗೆ ಚಾಕುವಿನಿಂದ ತಿವಿದು ಕೊಲೆಗೆ ಯತ್ನಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ವಿಜಯ್ ಕುಮಾರ್‌ನನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
PublicNext
24/01/2022 03:20 pm