ಪಟ್ನಾ: ಇಬ್ಬರು ಆರೋಗ್ಯ ಕಾರ್ಯಕರ್ತೆಯರು ಪರಸ್ಪರ ಜಡೆ ಹಿಡಿದು ಹೊಡೆದಾಡಿಕೊಂಡ ಘಟನೆ ಬಿಹಾರದ ಜುಮುಯಿ ಜಿಲ್ಲೆಯಲ್ಲಿ ನಡೆದಿದೆ.
ಜುಮುಯಿ ಜಿಲ್ಲೆಯ ಲಕ್ಷ್ಮೀಪುರ ಬ್ಲಾಕ್‌ನಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಆರೋಗ್ಯ ಕಾರ್ಯಕರ್ತೆ ರಂಜನಾ ಕುಮಾರಿ ಹಾಗೂ ಆಶಾ ಕಾರ್ಯಕರ್ತೆ ರಿಂತು ಕುಮಾರಿ ನಡುವೆ ಈ ಮಾರಾಮರಿ ನಡೆದಿದೆ. ಆಶಾ ಕಾರ್ಯಕರ್ತೆ ರಿಂತು ಕುಮಾರಿ ಅವರು ಬಿಸಿಜಿ ಲಸಿಕೆ ಹಾಕಿಸಲು ಮಗುವೊಂದನ್ನು ಆರೋಗ್ಯ ಕೇಂದ್ರಕ್ಕೆ ತಂದಿದ್ದಾರೆ. ಈ ವೇಳೆ ಲಸಿಕೆ ಹಾಕಲು ಆರೋಗ್ಯ ಸಿಬ್ಬಂದಿಯಾಗಿರುವ ರಂಜನಾ ಕುಮಾರಿ ಲಸಿಕೆ ಹಾಕಲು 500 ರೂ. ಗೆ ಬೇಡಿಕೆ ಇಟ್ಟಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಚಪ್ಪಲಿಯಿಂದಲೂ ಹೊಡೆದಾಡಿಕೊಂಡಿದ್ದಾರೆ.
ಇದರ ವಿಡಿಯೋ ವೈರಲ್ ಆದ ನಂತರ ಘಟನೆ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿದುಬಂದಿದ್ದು ಇಬ್ಬರ ಮೇಲೆ ಕ್ರಮ ಕೈಗೊಳ್ಳೋದಾಗಿ ಹೇಳಿದ್ದಾರೆ.
PublicNext
24/01/2022 10:29 pm