ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮ್ಯಾನ್ಸ್- ದೃಶ್ಯ ಸೆರೆ ಹಿಡಿದ ವಿದ್ಯಾರ್ಥಿಗಳು

ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯಶಿಕ್ಷಕನೋರ್ವ ರೊಮ್ಯಾನ್ಸ್ ಮಾಡಿದ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಈ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್ ಆಗುತ್ತಿದೆ.

ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಮುದ್ದಾಡುತ್ತಿದ್ದ ದೃಶ್ಯವನ್ನು ಹೊರಗಿನಿಂದ ಕಿಟಕಿ ಬಳಿ ನಿಂತು ಕೆಲ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದಾರೆ. ಕಿಟಕಿ ಬಳಿ ವಿಡಿಯೋ ಮಾಡುತ್ತಿರುವುದನ್ನು ನೋಡಿದ ಕೂಡಲೇ ವಿದ್ಯಾರ್ಥಿನಿಯನ್ನ ಬಿಟ್ಟ ಮುಖ್ಯಶಿಕ್ಷಕ ಸುಮ್ಮನೆ ನಿಲ್ಲುತ್ತಾನೆ. ಅಷ್ಟರಲ್ಲಿ ಆ ವಿದ್ಯಾರ್ಥಿನಿ ಕೊಠಡಿಯಿಂದ ಹೊರ ಹೋಗುತ್ತಾಳೆ. ಇದಿಷ್ಟು ವಿಡಿಯೋದಲ್ಲಿದ್ದು, ವೈರಲ್​ ಆಗಿದೆ.

ವೈರಲ್​ ಆಗುತ್ತಿದ್ದಂತೆ ಗ್ರಾಮಸ್ಥರು ಶಾಲೆಯ ಶಿಕ್ಷಕನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿ ಬಿಇಒ ಶಾಲೆಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

Edited By : Shivu K
PublicNext

PublicNext

25/01/2022 04:16 pm

Cinque Terre

154.06 K

Cinque Terre

26