ಚಂಡೀಗಢ: ಪಂಜಾಬ್‌ನ ಪಟಿಯಾಲದ ಐತಿಹಾಸಿಕ ಕಾಳಿ ಮಂದಿರದಲ್ಲಿ ವಿಗ್ರಹವನ್ನು ವಿರೂಪಗೊಳಿಸುವ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನೈಂಕಾಲನ್ ಗ್ರಾಮದ ನಿವಾಸಿಯೆಂದು ಗುರುತಿಸಲಾಗಿದೆ. ಆರೋಪಿಯು ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನಿಸಿದ್ದಾರೆ. ತಕ್ಷಣವೇ ದೇವಾಲಯದ ಅರ್ಚಕ ಹಾಗೂ ಸ್ಥಳೀಯರು ಆತನನ್ನು ತಡೆದಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪಂಜಾಬ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಸಿಎಂ ಚರಂಜಿತ್ ಸಿಂಗ್ ಚನ್ನಿ, 'ಚುನಾವಣೆಗೂ ಮುನ್ನ ಶಾಂತಿಯನ್ನು ಹಾಳು ಮಾಡಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಯೊಬ್ಬರು ಸಮಾಜದ ಶಾಂತಿಯನ್ನು ಕಾಪಾಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.
PublicNext
26/01/2022 10:05 am