ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಮೈಸೂರು: ಬಾಳಿ ಬದುಕಬೇಕಾದ ದಂಪತಿ ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.

ಸಾತಗಳ್ಳಿ ಲೇಔಟ್ ನ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿ ಈ ಕೆಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
PublicNext

PublicNext

26/01/2022 09:49 pm

Cinque Terre

105.78 K

Cinque Terre

38