ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪನವರ ಕೊನೆಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ನೇಣು ಬಿಗಿದುಕೊಂಡವರು. ಸೌಂದರ್ಯ ಇಂದು ಬೆಂಗಳೂರಿನ ತಮ್ಮ ಅಪಾರ್ಟ್ ಮೆಂಟಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ವಿಧಿವಿಧಾನಗಳು ನಡೆಯುತ್ತಿವೆ.
ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಇಂದು ಸೌಂದರ್ಯ ತಾವು ವಾಸವಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಯಾರೂ ಇಲ್ಲದಿದ್ದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಮಲ್ಲಿಗೆ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಲ್ಲಿಗೆ ತಲುಪುವಷ್ಟರ ಹೊತ್ತಿಗೆ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ಹೇಳಲಾಗುತ್ತಿದೆ.
ಕೌಟುಂಬಿಕ ಕಲಹದಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗುತ್ತಿದೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸೌಂದರ್ಯ ನಗರದ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದರು.
PublicNext
28/01/2022 02:04 pm