ರಾಯಚೂರು: 2 ವರ್ಷದ ಪುಟ್ಟ ಕಂದಮ್ಮನೊಂದಿಗೆ ತಾಯಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.
ಸಿರವಾರ ಪಟ್ಟಣ ನಿವಾಸಿ ಶಿರೀಷ (35) ಹಾಗೂ ಎರಡು ವರ್ಷದ ಮಗು ಸಾವಿಗೀಡಾದ ದುರ್ದೈವಿಗಳು. ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದ ಶಿರೀಷ ಮನೆಯಲ್ಲಿ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಈ ವೇಳೆ ಮಗುವಿಗೂ ಬೆಂಕಿ ತಗುಲಿ ತಾಯಿ, ಮಗು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಸಂಬಂಧ ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತಂತೆ ತನಿಖೆ ಶುರು ಮಾಡಿದ್ದಾರೆ. ಇನ್ನು ಎರಡು ವರ್ಷದ ಕಂದನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ.
PublicNext
01/02/2022 06:51 pm