ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೇಶದ ನಂ.1 ಸ್ನೇಕ್ ಕ್ಯಾಚರ್ ವಾವಾ ಸುರೇಶ್‌ಗೆ ಕಚ್ಚಿದ ನಾಗರ ಹಾವು- ಸ್ಥಿತಿ ಗಂಭೀರ

ತಿರುವನಂತಪುರಂ: ಕೇರಳದ ಜನಪ್ರಿಯ ಸ್ನೇಕ್ ಕ್ಯಾಚರ್ (ಹಾವು ಹಿಡಿಯುವ ವ್ಯಕ್ತಿ) ವಾವಾ ಸುರೇಶ್​​ಗೆ ನಾಗರಹಾವು ಕಚ್ಚಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ಕಾಪಾಡುವುದರಲ್ಲಿ ಖ್ಯಾತರಾಗಿದ್ದ 47 ವರ್ಷದ ಸುರೇಶ್, ಕೊಟ್ಟಾಯಂ ಜಿಲ್ಲೆಯ ಚಂಗನಾಶ್ಶೇರಿ ಸಮೀಪದ ಕುರಿಚಿ ಎಂಬ ಹಳ್ಳಿಯ ಮನೆಯೊಂದರಲ್ಲಿ ಜನವರಿ 31ರಂದು ನಾಗರಹಾವು ಹಿಡಿಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಹಾವು ಕಚ್ಚಿದೆ. ಸ್ಥಳೀಯ ನಿವಾಸಿಯೊಬ್ಬರು ಸೆರೆಹಿಡಿದ ಘಟನೆಯ ವಿಡಿಯೋದಲ್ಲಿ ಸುರೇಶ್ ಅವರು ನಾಗರಹಾವನ್ನು ಗೋಣಿ ಚೀಲದೊಳಗೆ ಹಾಕಲು ಅದರ ಬಾಲವನ್ನು ಕೈಯಲ್ಲಿ ಹಿಡಿದು ತಲೆಕೆಳಗಾಗಿ ಹಿಡಿದಿದ್ದರು. ಆಗ ಹಾವು ಅವರ ಬಲ ತೊಡೆಯ ಮೇಲೆ ಕಚ್ಚಿದೆ.

ವಾವಾ ಸುರೇಶ್ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ರಾತ್ರಿ ಸುರೇಶ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಮಂಗಳವಾರ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

Edited By : Vijay Kumar
PublicNext

PublicNext

02/02/2022 07:11 am

Cinque Terre

81.11 K

Cinque Terre

5

ಸಂಬಂಧಿತ ಸುದ್ದಿ