ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ರೊಮ್ಯಾನ್ಸ್ ಕೇಸ್; ಮುಖ್ಯ ಶಿಕ್ಷಕ ಅರೆಸ್ಟ್

ಮೈಸೂರು: ಶಾಲೆಯಲ್ಲೇ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದ ಮುಖ್ಯ ಶಿಕ್ಷಕನನ್ನು ಮೈಸೂರು ಜಿಲ್ಲೆಯ ಎಚ್‌ .ಡಿ.ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅನಿಲ್‌ ಕುಮಾರ್‌ ಬಂಧಿತ ಮುಖ್ಯ ಶಿಕ್ಷಕ. ಆರೋಪಿಯು ಎಚ್‌ .ಡಿ.ಕೋಟೆ ತಾಲೂಕಿನ ಪ್ರತಿಷ್ಠಿತ ಖಾಸಗಿ ಶಾಲೆಯೊಂದರಲ್ಲಿ ಮುಖ್ಯ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಇತ ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ತರಗತಿಯಲ್ಲಿ ರೊಮ್ಯಾನ್ಸ್‌ನಲ್ಲಿ ತೊಡಗಿದ್ದಾಗ, ಈ ದೃಶ್ಯವನ್ನು ಅದೇ ಶಾಲೆಯ ವಿದ್ಯಾರ್ಥಿ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಘಟನೆ ಸಂಬಂಧ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ನಂತರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೂಡ ಈ ಮುಖ್ಯ ಶಿಕ್ಷಕನನ್ನು ಕರ್ತವ್ಯದಿಂದ ವಜಾಗೊಳಿಸುವುದಾಗಿಯೂ ತಿಳಿಸಿತ್ತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಆದೇಶದಂತೆ ಡಿವೈಎಸ್‌ಪಿ ಮಾರ್ಗದರ್ಶನದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಬಸವರಾಜು ಎಚ್‌.ಡಿ.ಕೋಟೆ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Edited By : Nagesh Gaonkar
PublicNext

PublicNext

02/02/2022 10:40 am

Cinque Terre

138.17 K

Cinque Terre

17

ಸಂಬಂಧಿತ ಸುದ್ದಿ