ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವು

ವಿಜಯಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮುದ್ದೇಬಿಹಾಳ ಮೂಲದ ಬಿಎಸ್ಎಫ್ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.

ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಸವರಾಜ ಸಿದ್ದಪ್ಪ ಡೊಂಗರಗಾವಿ (28) ಸಾವನ್ನಪ್ಪಿದ ಯೋಧ. ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧ ಬಸವರಾಜ ಅವರು ರಜೆಯ ನಿಮಿತ್ತ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಎರಡು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಬಿಎಸ್ಎಫ್ ಯೋಧ ಬಸವರಾಜ ಅವರಿಗೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಯೋಧ ಬಸವರಾಜ ಅವರು ಸೇವೆಗೆ ಸೇರಿ 8-10 ವರ್ಷಗಳಾಗಿದ್ದು, ಪ್ರಸ್ತುತ ಬಿಹಾರದಲ್ಲಿ ಕರ್ತವ್ಯದಲ್ಲಿದ್ದರು. ಇತ್ತೀಚೆಗಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಾಗ ಆಲಮಟ್ಟಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿತ್ತು. ಮೃತರು ಪತ್ನಿ, ಎರಡು ಗಂಡು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Edited By : Vijay Kumar
PublicNext

PublicNext

02/02/2022 01:48 pm

Cinque Terre

73.31 K

Cinque Terre

9