ಮಂಡ್ಯ: ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮೀ(26), ರಾಜ್(12), ಕೋಮಲ್(7), ಕುನಾಲ್(4), ಗೋವಿಂದ್(8) ಎಂಬಾತರೇ ಬರ್ಬರವಾಗಿ ಕೊಲೆಯಾದ ದುರ್ದೈವಿಗಳು. ನಿನ್ನೆ ತಡರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಸುದ್ದಿ ತಿಳಿದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸದ್ಯ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ಕಾರಣ ಏನೆಂಬುದು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
06/02/2022 12:50 pm