ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಡ್ಯ: ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಪ್ರೇಮಿಗಳು

ಮಂಡ್ಯ: ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಚೊಟ್ಟನಹಳ್ಳಿಯ ರಶ್ಮಿ (17), ಆಲದಹಳ್ಳಿಯ ಶಶಾಂಕ್ (17) ಎಂಬಾತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಶ್ಮಿ ನೇಣಿಗೆ ಶರಣಾಗಿದ್ದನ್ನು ತಿಳಿದ ಶಶಾಂಕ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮಳವಳ್ಳಿ ಶಾಂತಿ ಕಾಲೇಜಿನಲ್ಲಿ ಇಬ್ಬರು ವ್ಯಾಸಂಗ ಮಾಡುತ್ತಿದ್ದರು. ಇದೇ ವೇಳೆ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ತನ್ನ ಪ್ರಿಯತಮೆ ನೇಣಿಗೆ ಶರಣಾಗಿದ್ದನ್ನು ತಿಳಿದ ಶಶಾಂಕ್ ವಿಷ ಸೇವಿಸಿ ಅಸ್ವಸ್ಥನಾಗಿದ್ದ. ಕೂಡಲೇ ಆತನನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಶಶಾಂಕ್ ಮೃತಪಟ್ಟಿದ್ದಾನೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.

Edited By : Nagaraj Tulugeri
PublicNext

PublicNext

06/02/2022 01:52 pm

Cinque Terre

46.42 K

Cinque Terre

3

ಸಂಬಂಧಿತ ಸುದ್ದಿ