ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಈಗಲ್ ಟನ್ ರೆಸಾರ್ಟ್ ಬಳಿ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹಣಕ್ಕಾಗಿ ಈ ಕೊಲೆ ನಡೆದಿದೆ ಎನ್ನಲಾಗಿದೆ.
ಮಾಜಿ ಏರ್ ಫೋರ್ಸ್ ಪೈಲಟ್ ರಘುರಾಜ್ (70) ಹಾಗೂ ಅವರ ಪತ್ನಿ ಆಶಾ (63) ಕೊಲೆಯಾದ ದಂಪತಿ. ಇವರು ಈಗಲ್ ಟನ್ ರೆಸಾರ್ಟ್‌ನ ಮಾಲೀಕರಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಅಲ್ಲೇ ವಾಸವಿದ್ದ ದಂಪತಿಯನ್ನು ಎರಡು ಪ್ರತ್ಯೇಕ ಕೋಣೆಗಳಲ್ಲಿ ಕೊಲೆ ಮಾಡಲಾಗಿದೆ. ಹಣಕ್ಕಾಗಿ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಇಬ್ಬರ ಹತ್ಯೆ ಮಾಡಲಾಗಿದೆ.
ಘಟನೆ ಬಳಿಕ ಮನೆಯ ಸೆಕ್ಯೂರಿಟಿ ಗಾರ್ಡ್ ಪರಾರಿಯಾಗಿದ್ದಾನೆ. ಮನೆಯಲ್ಲಿ ಕೆಲಸಕ್ಕಿದ್ದವರೇ ದಂಪತಿಯ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಾಮನಗರ ಎಸ್ಪಿ ಸಂತೋಷ್ ಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
08/02/2022 10:56 pm