ಚಂಡೀಗಡ: ಅಪಾರ್ಟ್ಮೆಂಟ್ವೊಂದರ ಛಾವಣಿ ಕುಸಿದು ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿರುವ ಚಿಂಟೆಲ್ಸ್ ಪ್ಯಾರಾಡಿಸೋ ಹೌಸಿಂಗ್ ಕಾಂಪ್ಲೆಕ್ಸ್ನಲ್ಲಿ ತಡರಾತ್ರಿ ನಡೆದಿದೆ.
ಕಟ್ಟಡ ದುರಸ್ತಿ ವೇಳೆ ಆರನೇ ಮಹಡಿಯ ಛಾವಣಿ ಕುಸಿದು ಅವಘಡ ಸಂಭವಿಸಿದೆ. ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗುರುಗ್ರಾಮ್ ಪೊಲೀಸ್ ಆಯುಕ್ತರು, ಅಗ್ನಿ ಶಾಮಕ ದಳದ ಸಿಬ್ಬಂದಿ, ಎನ್ಡಿಆರ್ ಮತ್ತು ಎಸ್ಡಿಆರ್ಎಫ್ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಈ ಅಪಾರ್ಟ್ಮೆಂಟ್ನಲ್ಲಿ 530 ಪ್ಲ್ಯಾಟ್ಸ್ ಇದ್ದು, 400 ಕುಟುಂಬಗಳು ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
PublicNext
11/02/2022 09:13 am