ನವದೆಹಲಿ: ಆಸ್ತಿ ಹಂಚಿಕೆ ವಿಚಾರವಾಗಿ ಸಂಬಂಧಿಕರು ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೆಹಲಿಯ ಉಸ್ಮಾನ್‌ಪುರ ಪ್ರದೇಶದಲ್ಲಿ ಹಾಡಹಗಲೇ ಈ ಘಟನೆ ನಡೆದಿದ್ದು ಪೊಲೀಸರು ವಿಡಿಯೋದಲ್ಲಿರುವ ಒಬ್ಬನನ್ನು ಗುರುತಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಸಂಬಂಧಿಕರಾಗಿರುವ ಎರಡು ಕುಟುಂಬಗಳ ನಡುವೆ ಸುಮಾರು ವರ್ಷಗಳಿಂದ ಆಸ್ತಿ ಜಗಳ ಇತ್ತು. ಇತ್ತೀಚೆಗೆ ಆ ಜಗಳ ತಾರಕಕ್ಕೇರಿ ನಡುರಸ್ತೆಯಲ್ಲಿ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಬಂದಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
12/02/2022 06:10 pm