ಬೆಂಗಳೂರು: ಬಹುಕೋಟಿ ಅವ್ಯವಹಾರ ಹಿನ್ನೆಲೆ ಗುರು ರಾಘವೇಂದ್ರ ಬ್ಯಾಂಕ್‌ನ ಸಂಸ್ಥಾಪಕ ಅಧ್ಯಕ್ಷ ಕೆ.ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಅವರನ್ನು ಫೆ.18ರ ವರೆಗೂ ಕಸ್ಟಡಿಗೆ ಪಡೆಯಲಾಗಿದೆ.
ರಾಮಕೃಷ್ಣ ಬ್ಯಾಂಕ್‌ನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ 2,876 ಮಂದಿಗೆ 1,544.43 ಕೋಟಿ ರೂಪಾಯಿಯನ್ನು ಸಾಲವಾಗಿ ನೀಡಲಾಗಿದ್ದು ಇದರಲ್ಲಿ 892.85 ಕೋಟಿ ರೂಪಾಯಿಯನ್ನು ಬೋಗಸ್ ದಾಖಲೆಗಳಿಗೆ ಸಾಲವಾಗಿ ನೀಡಲಾಗಿದೆ ಎಂದು ಇವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
PublicNext
16/02/2022 09:42 am