ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಬೆಂಗಳೂರಿನಲ್ಲೂ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯ ಬಳಿಕ ಆರೋಪಿಗಳು ಬೈಕ್ನಲ್ಲಿ ಪರಾರಿಯಾಗಿದ್ದರು.
ನಂತರ ಶಿವಮೊಗ್ಗದ ರೈಲ್ವೆ ನಿಲ್ದಾಣದ ಬಳಿ ಬೈಕ್ ಬಿಟ್ಟು ರೈಲಿನಲ್ಲಿ ಬೆಂಗಳೂರು ತಲುಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹಂತಕರು ಬಂದಿಳಿದಿರುವ ಸಾಧ್ಯತೆಯಿದೆ. ಹೀಗಾಗಿ ರೈಲು ನಿಲ್ದಾಣದ ಪ್ರತಿಯೊಂದು ಫ್ಲಾಟ್‌ಪಾರಂನ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಶಂಕಿತರನ್ನು ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹಂತಕರ ತಂಡ ಹರ್ಷನನ್ನು ಕೊಲೆ ಮಾಡುವ ಒಂದು ವಾರದ ಮುಂಚೆಯೇ ಸಂಚು ರೂಪಿಸಿದ್ದರು. ಹರ್ಷ ಎಲ್ಲೆಲ್ಲಿ ಓಡಾಡ್ತಾನೆ, ಒಂಟಿಯಾಗಿ ಎಲ್ಲಿರ್ತಾನೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಇದೀಗ ಹಂತಕರು ಬೆಂಗಳೂರಲ್ಲೇ ಅಡಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಈ ಎಲ್ಲ ಮಾಹಿತಿಯ ಆಧಾರಿತವಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
PublicNext
21/02/2022 10:32 pm