ರಾಯಚೂರು: ತನ್ನ ಪತ್ನಿ ಮತ್ತೊಬ್ಬನ ಜೊತೆಗೆ ಓಡಿ ಹೋಗಿದ್ದಕ್ಕೆ ಮನನೊಂದು ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ಗುರಗುಂಟಾದ ನಿವಾಸಿ ಗಿರಿಧರ್ (42) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಗಿರಿಧರ್ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಹಟ್ಟಿ ಚಿನ್ನದ ಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
22/02/2022 07:20 am