ಅಮರಾವತಿ: ಅಂಧ ಮಹಿಳೆಯ ಮೇಲೆ ನಿವೃತ್ತ ಕಾನ್ಸ್‌ಟೇಬಲ್ ಪುತ್ರನೋರ್ವ ಅತ್ಯಾಚಾರ ಎಸಗಿದ ಘಟನೆ ಆಂಧ್ರಪ್ರದೇಶದ ಚಿತ್ತೂರಿನಲ್ಲಿ ನಡೆದಿದೆ. ಈ ದುಷ್ಕೃತ್ಯದಲ್ಲಿ ವಿವಾಹಿತ ವ್ಯಕ್ತಿ ಭಾಗಿಯಾಗಿದ್ದಾನೆ.
ಸಂತ್ರಸ್ತೆಯ ಕುಟುಂಬ ಚಿತ್ತೂರಿನಲ್ಲಿ ವಾಸವಾಗಿದ್ದು, ಯುವತಿಯ ತಂದೆ ಈ ಹಿಂದೆ ತೀರಿಕೊಂಡಿದ್ದರು. ಸದ್ಯ ತಾಯಿ ಜೊತೆ ಯುವತಿ ಉಳಿದುಕೊಂಡಿದ್ದಾಳೆ. ಇದೇ ಪ್ರದೇಶದಲ್ಲಿ ವಾಸವಾಗಿರುವ ನಿವೃತ್ತ ಪೊಲೀಸ್ ಕಾನ್ಸ್‌ಟೇಬಲ್ ಪುತ್ರ ಜಯಚಂದ್ರ ಅಂಧ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಈ ಸಂಬಂಧ ಸಂತ್ರಸ್ತೆಯ ತಾಯಿ ದಿಶಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. 'ವಿಶ್ವ ಮಹಿಳಾ ದಿನಾಚರಣೆಯಂದು ಆಕೆಗೆ ಸುಳ್ಳು ಹೇಳಿ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ' ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಷ್ಟೇ ಅಲ್ಲದೆ ಆರೋಪಿಯ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಕಾರಣ ಪ್ರಕರಣ ದಿಕ್ಕು ತಪ್ಪುವ ಸಾಧ್ಯತೆ ದಟ್ಟವಾಗಿದ್ದು, ಉನ್ನತ ಅಧಿಕಾರಿಗಳು ಪ್ರಕರಣದ ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಆರೋಪಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಚಿತ್ತೂರು ದಿಶಾ ಪೊಲೀಸ್ ಠಾಣೆ ಸಿಐ ಮುರಳಿಮೋಹನ್ ತಿಳಿಸಿದ್ದಾರೆ.
PublicNext
09/03/2022 05:53 pm