ದಾವಣಗೆರೆ: ಕಾಲೇಜು ಯುವಕರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ದಾವಣಗೆರೆ ನಗರದ ಎಂಸಿಸಿಬಿ ಬ್ಲಾಕ್‌ನಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಒಂದು ಗುಂಪಿನ ವಿದ್ಯಾರ್ಥಿಗಳ ಮೇಲೆ ಮತ್ತೊಂದು ಗುಂಪಿನವರು ಸ್ಥಳೀಯ ಪುಂಡರನ್ನು ಕರೆಸಿಕೊಂಡು ಗಲಾಟೆ ಮಾಡಿದ್ದಾರೆ. ಅದರ ವಿಡಿಯೋ ಈಗ ವೈರಲ್ ಆಗಿದೆ.
ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದು, ನಡುರಸ್ತೆಯಲ್ಲಿ ಓರ್ವ ವಿದ್ಯಾರ್ಥಿಗೆ ಮನಬಂದಂತೆ ಹಲ್ಲೆ ನಡೆಸಲಾಗಿದೆ. ಹಲ್ಲೆ ಸಂಬಂಧ ಕೆಲವರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
09/03/2022 06:03 pm