ಲಕ್ನೋ: ಉತ್ತರ ಪ್ರದೇಶದ ಖುದಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ತಂದೆಯಿಂದ ಅತ್ಯಾಚಾರಕ್ಕೊಳಗಾದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾರ್ಚ್ 5ರಂದು ಬಾಲಕಿಯ ತಾಯಿ ಸಂಬಂಧಿಕರನ್ನು ಭೇಟಿ ಮಾಡಲು ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಖುದಗಂಜ್ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಸಂಜೀವ್ ಬಾಜಪೇಯ್ ಹೇಳಿದ್ದಾರೆ. ಆರೋಪಿ ತಂದೆಯನ್ನು ಬಂಧಿಸಲಾಗಿದೆ.
PublicNext
10/03/2022 09:12 am