ಗುಹಾವಟಿ: ಮಗುವನ್ನು ಕೊಂದ ಆರೋಪದ ಮೇಲೆ ಜನರ ಗುಂಪೊಂದು 35 ವರ್ಷದ ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿ ಕೊಂದು ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ದಿಬ್ರುಗಢ್‌ನಲ್ಲಿ ಶನಿವಾರ ನಡೆದಿದೆ.
ಆರೋಪಿಯು ಟೀ ಎಸ್ಟೇಟ್‌ನಲ್ಲಿ ಐದು ವರ್ಷದ ಮಗುವನ್ನು ಮಚ್ಚಿನಿಂದ ಕೊಚ್ಚಿ ಕೊಂದಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆ ಬೆನ್ನಲ್ಲೇ ಕೋಪಗೊಂಡ ಗುಂಪೊಂದು ಆರೋಪಿ ವ್ಯಕ್ತಿಯ ಮೇಲೆ ಮಾರಕಾಸ್ತ್ರ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
13/03/2022 11:44 am