ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಾತ್ರೆಯಲ್ಲಿ ಬಾಲೆಯರ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಕಾಮುಕರ ಬಂಧನ

ಅಲಿರಾಜ್‌ಪುರ: ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯ ವಾಲ್ಪುರ್‌‌ನಲ್ಲಿ ನಡೆದ ಜಾತ್ರೆ ವೇಳೆ ಇಬ್ಬರು ಬಾಲಕಿಯರ ಮೇಲೆ ಯುವಕರು ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಭೀಕರ ಕೃತ್ಯದಲ್ಲಿ ಭಾಗಿಯಾದ ಮೂವರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ವಿಡಿಯೋ ಶನಿವಾರ ರಾತ್ರಿಯಿಂದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು‌.

ಈ ಬಗ್ಗೆ ಮಾಹಿತಿ ನೀಡಿರುವ ಅಲಿರಾಜ್‌ಪುರ ಪೊಲೀಸ್ ವರಿಷ್ಟಾಧಿಕಾರಿ ಮನೋಜ್‌ಕುಮಾರ್ ಸಿಂಗ್, ಘಟನೆಯ ಬಗ್ಗೆ ನಮ್ಮ ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತವಾಗಿ ಕ್ರಮ ಜರುಗಿಸಿದ್ದೇವೆ. ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಬಂಧಿಸಿದ್ದೇವೆ. ಹಾಗೂ ಕೃತ್ಯಕ್ಕೆ ಪ್ರಚೋದನೆ ಹಾಗೂ ಸಹಕಾರ ನೀಡಿದ್ದೂ ಅಲ್ಲದೇ ವಿಡಿಯೋ ಚಿತ್ರೀಕರಣ ಮಾಡಿದ ಇತರ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದು ಶೀಘ್ರದಲ್ಲಿ ಅವರನ್ನೂ ಬಂಧಿಸುತ್ತೇವೆ ಎಂದಿದ್ದಾರೆ.

ಬಂಧಿತ ಆರೋಪಿಗಳ ಮೇಲೆ ಐಪಿಸಿ ಸೆಕ್ಷನ್ 354(ಎ), 34(ಎ) ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

Edited By : Nagaraj Tulugeri
PublicNext

PublicNext

14/03/2022 12:27 pm

Cinque Terre

102.79 K

Cinque Terre

31