ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳ್ಳಕ್ಕೆ ಬಿದ್ದ KSRTC ಬಸ್: ವೃದ್ಧೆ ಸೇರಿ ಇಬ್ಬರು ಸಾವು- ಐವರ ಸ್ಥಿತಿ ಗಂಭೀರ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್​​ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲೂಕಿನ‌ ಪಿ.ಜಿ‌.ಪಾಳ್ಯ ಸಮೀಪದಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಹನೂರು ತಾಲ್ಲೂಕಿನ ಪಿ.ಜಿ ಪಾಳ್ಯ ಗ್ರಾಮದ ಶಿವಮ್ಮ(50) ಹಾಗೂ ರಮೇಶ್​(30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಸ್​ ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ಬಸ್​​ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರು ತೆರಳುತ್ತಿದ್ದು, 40 ಮಂದಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Edited By : Vijay Kumar
PublicNext

PublicNext

14/03/2022 05:04 pm

Cinque Terre

31.85 K

Cinque Terre

0