ಬೆಳಗಾವಿ : ಬೆಳ್ಳಂಬೆಳಗ್ಗೆ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಬಿಲ್ಡರ್ ಒಬ್ಬರನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಕುಂದಾನಗರಿ ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದ ರಾಜು ದೊಡಬನ್ನವರ ಕೊಲೆಯಾದ ವ್ಯಕ್ತಿಯಾಗಿದ್ದು, ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಇದ್ದ ಬೆಳ್ಳಂಬೆಳಗ್ಗೆ ನೋಡಲು ಹೋಗುತ್ತಿದ್ದಾಗ ರಾಜು ಕಾರನ್ನು ಅಡ್ಡಗಟ್ಟಿದ ಹಂತಕರು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಸಿಪಿಐ ಸುನೀಲ್ ನಂದೇಶ್ವರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಬಿಲ್ಡರ್ ಕೊಲೆಗೆ ಈವರೆಗೂ ಕಾರಣ ತಿಳಿದು ಬಂದಿಲ್ಲ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
15/03/2022 02:11 pm