ಮುಂಬೈ: 11 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ, ಸಹೋದರ, ಅಜ್ಜ, ಚಿಕ್ಕಪ್ಪ ಕಳೆದ ಐದು ವರ್ಷಗಳಿಂದ ಅತ್ಯಾಚಾರ ಎಸಗಿದ ಆಘಾತಕಾರಿ ಹಾಗೂ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿದೆ.
ಸದ್ಯ ಬಾಲಕಿಯನ್ನು ರಕ್ಷಣೆ ಮಾಡಿರುವ ಪೊಲೀಸರು ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. 2017ರಲ್ಲಿ ಬಿಹಾರದಲ್ಲಿ ವಾಸಿಸುತ್ತಿದ್ದಾಗ ಬಾಲಕಿಯ ತಂದೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ನಂತರ ಬಾಲಕಿ ಪುಣೆಗೆ ತೆರಳಿದಾಗ ಸಹೋದರ ಆಕೆಯ ಮೇಲೆ ರೇಪ್ ಮಾಡಿದ್ದ. ಕಳೆದ ವರ್ಷ ಆಕೆಯ ಅಜ್ಜ ಮತ್ತು ಚಿಕ್ಕಪ್ಪ ಇಬ್ಬರೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.
PublicNext
19/03/2022 04:42 pm