ಭೋಪಾಲ್: ಹೋಳಿ ಹಬ್ಬ ಸಂಭ್ರಮದಲ್ಲಿ ಮದ್ಯ ಸೇವಿಸಿ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೋರ್ವ 4 ಬಾರಿ ಚೂರಿ ಇರಿದುಕೊಂಡ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವ್ಯಕ್ತಿಯು ಡ್ಯಾನ್ಸ್ ಮಾಡುವಾಗ ಆಕಸ್ಮಿಕವಾಗಿ ಚಾಕುವಿನಿಂದ ತನ್ನನ್ನು ತಾನು ನಾಲ್ಕು ಬಾರಿ ಇರಿದುಕೊಂಡಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
19/03/2022 05:24 pm