ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ, ಕೋವಿಡ್‌ಗಿಂತ ಮಾರಕ: ತನ್ವೀರ್ ಸೇಠ್

ಮೈಸೂರು: ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ ಕೊರೊನಾ ಮಹಾಮಾರಿಗಿಂತಲೂ ಮಾರಕ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಮಾಡುವ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ. ಚುನಾವಣೆ ವೇಳೆ ರಾಜಕಾರಣ ಮಾಡೋದು ಸರಿ. ಅಧಿಕಾರ ಬಂದ ಮೇಲೆ ಜಾತ್ಯತೀತವಾಗಿ ನಡೆದುಕೊಳ್ಳುಬೇಕು. ಶಿಕ್ಷಣ ಬಿಟ್ಟು ಸರಕಾರ ಅನ್ಯ ವಿಚಾರಗಳ ಬಗ್ಗೆ ಗಮನಹರಿಸಬಾರದು. ಈಗಾಗಲೇ ಕೊರೊನಾದಿಂದ ಎರಡು ವರ್ಷ ಮಕ್ಕಳಿಗೆ ಶಿಕ್ಷಣ ಸಿಕ್ಕಿಲ್ಲ. ಶಾಲೆಯಲ್ಲಿ ಸಮಾನತೆ ಕಾಪಾಡಿಕೊಳ್ಳಬೇಕು ಎಂದಿದ್ದಾರೆ.

Edited By : Vijay Kumar
PublicNext

PublicNext

19/03/2022 10:01 pm

Cinque Terre

78.28 K

Cinque Terre

69

ಸಂಬಂಧಿತ ಸುದ್ದಿ