ತೀರ್ಥಹಳ್ಳಿ: ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ (ಸೋಮವಾರ) ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು, ಇಂದು ಶವ ಪತ್ತೆಯಾಗಿದೆ.
ಹೊಸನಗರದ ಮಂಜುನಾಥ್ (24) ಹಾಗೂ ತೀರ್ಥಹಳ್ಳಿಯ ವರ್ಧನ್ (18) ನಾಪತ್ತೆಯಾದ ಯುವಕರು. ವರ್ಧನ್ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ. ನಿನ್ನೆ ಸಂಜೆಯ ವೇಳೆ ದಂಡೆಯ ಮೇಲೆ ಬೈಕ್, ಬಟ್ಟೆ ಹಾಗೂ ಚಪ್ಪಲಿಗಳನ್ನು ಬಿಟ್ಟು ಬಂಡೆಗಳ ಮೇಲೆ ತುಂಗಾ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು, ಸ್ಥಳದಲ್ಲಿ ಇಬ್ಬರ ಯೂನಿಫಾರ್ಮ್ ಮೊಬೈಲ್ ಪತ್ತೆಯಾಗಿತ್ತು.
ನಿನ್ನೆಯಿಂದ ಅಗ್ನಿಶಾಮಕದಳದ ಸಿಬ್ಬಂದಿ ಹುಡುಕಾಟ ನಡೆಸಿದ್ದರು. ಇಂದು ಅಗ್ನಿ ಶಾಮಕ ದಳ, ಸ್ಥಳೀಯರು ಹಾಗೂ ಪೊಲೀಸರ ಸಹಕಾರದೊಂದಿಗೆ ಇಂದು ಶವ ನದಿಯಿಂದ ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
PublicNext
22/03/2022 03:10 pm