ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರಸಾದ ತರದಿದ್ದಕ್ಕೆ ದಂಪತಿ ಜಗಳ: ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ರಾಮನಗರ: ದೇವಸ್ಥಾನಕ್ಕೆ ಹೋದ ಪತಿ ಪ್ರಸಾದ ತರಲಿಲ್ಲವೆಂಬ ಕಾರಣಕ್ಕೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರದ ರಾಯರದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಶ್ವೇತ (27) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮಹದೇಶ್ವರ ಬೆಟ್ಟಕ್ಕೆ ಹೋಗಿದ್ದ ಪತಿ ಶಿವನಂಜ ಹಾಗೂ ಮಗ ವಾಪಸ್ ಬರುವಾಗ ಪ್ರಸಾದ ತಂದಿಲ್ಲವೆಂಬ ಕಾರಣಕ್ಕೆ ದಂಪತಿ ನಡುವೆ ಜಗಳವಾಗಿತ್ತು. ಇದೇ ಕಾರಣಕ್ಕೆ ಶ್ವೇತ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗಿದೆ. ಮಂಡ್ಯ ಜಿಲ್ಲೆಯ ಕೊಪ್ಪ ಗ್ರಾಮದ ಈ ಜೋಡಿ ಪ್ರೇಮಿಸಿ ಮದುವೆ ಆಗಿದ್ದರು. ದಂಪತಿಗೆ ನಾಲ್ವರು ಮಕ್ಕಳಿದ್ದು ರಾಮನಗರದ ರಾಯರದೊಡ್ಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪತಿ ಶಿವನಂಜ ಹಾಗೂ ಪತ್ನಿ ಶ್ವೇತಾ ನಡುವೆ ಆಗಾಗ ದಂಪತಿ ಕಲಹವೂ ಆಗುತ್ತಿತ್ತು. ಐಜೂರು ಪೋಲಿಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

22/03/2022 03:59 pm

Cinque Terre

33.61 K

Cinque Terre

0

ಸಂಬಂಧಿತ ಸುದ್ದಿ