ಪಾಟ್ನಾ: ಬಿಹಾರದಲ್ಲಿ 20ರ ಹರೆಯದ ಮಹಿಳೆಯೊಬ್ಬಳು ತನ್ನ ಸಂಬಂಧಿಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ನೆರೆಹೊರೆಯವರು ಮನಬಂದಂತೆ ಥಳಿಸಿದ್ದಾರೆ. ಈ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೈರಲ್ ವಿಡಿಯೋವನ್ನು ಗಮನಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ತಿಳಿಸಿದ್ದಾರೆ. ಮಹಿಳೆಯು ನೆಲಕ್ಕೆ ಬೀಳುವವರೆಗೂ ಕೋಲಿನಿಂದ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಹಲ್ಲೆಗೆ ಒಳಗಾದ ಮಹಿಳೆಯು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
PublicNext
24/03/2022 06:12 pm