ಜಮ್ಮು ಕಾಶ್ಮೀರದ ಸೋಪೋರ್ ನಲ್ಲಿ ಮಾ.29 ರಂದು ಬುರ್ಖಾಧಾರಿ ಮಹಿಳೆಯೊಬ್ಬಳು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಬಂಕರ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವಿಡಿಯೋ ವೈರಲ್ ಆಗಿದೆ.
ಸದ್ಯ ಸಿಸಿಟಿಯಲ್ಲಿ ಸೆರೆಯಾದ ವಿಡಿಯೋವನ್ನು ಸಿಆರ್ ಪಿಎಫ್ ಶೇರ್ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ ಕುಮಾರ್, ನಿನ್ನೆ ಬಂಕರ್ ಮೇಲೆ ಬಾಂಬ್ ಎಸೆದ ಮಹಿಳೆಯನ್ನು ಗುರುತಿಸಲಾಗಿದೆ. ಶೀಘ್ರದಲ್ಲಿಯೇ ಆಕೆಯನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.
PublicNext
30/03/2022 12:05 pm