ಶ್ರೀಶೈಲ: ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ನೀರಿನ ಬಾಟಲಿ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಜಗಳ ಆರಂಭವಾಗಿದೆ. ಆಂಧ್ರ ಮೂಲದ ವ್ಯಾಪಾರಸ್ಥರು ಹಾಗೂ ಸ್ಥಳೀಯರಿಂದ ಕರ್ನಾಟಕ ಭಕ್ತರ ಮೇಲೆ ಹಲ್ಲೆ ನಡೆದಿದೆ ಎಂದು ಮೂಲಗಳಿಂದ ತಿಳಿದಿದೆ.
ಗಲಾಟೆಯಲ್ಲಿ ಕರ್ನಾಟಕ ಮೂಲದ ಇನ್ನೂರು ವಾಹನಗಳ ಗಾಜುಗಳನ್ನು ಪುಡಿ ಮಾಡಲಾಗಿದೆ ಎನ್ನಲಾಗಿದೆ. ಕರ್ನಾಟಕ ಮೂಲದ ಕೆಲವು ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಲಾಠಿ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಡುತ್ತಿರುವ ವಿಡಿಯೋಗಳು ಲಭ್ಯವಾಗಿದೆ. ಬೆಳಗಾವಿ ಮೂಲದ ಭಕ್ತರಿಗೆ ಗಾಯಗಳಾಗಿವೆ ಎನ್ನುವ ಬಗ್ಗೆ ಮಾಹಿತಿ ಇದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
PublicNext
31/03/2022 04:15 pm