ಲಕ್ನೋ: ಕಾರು ಚಾಲಕನೋರ್ವ ಬೇಕಂತಲೇ ವೃದ್ಧನಿಗೆ ಗುದ್ದಿ ಸ್ಥಳದಿಂದ ಪರಾರಿಯಾದ ಭೀಕರ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದ್ದು, ಈ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ ವಯಸ್ಸಾದ ವೃದ್ಧರೊಬ್ಬರು ಕುರ್ಚಿ ಬರುತ್ತಿರುತ್ತಾರೆ. ಈ ವೇಳೆ ಏಕಾಏಕಿ ವೇಗವಾಗಿ ಬಂದ ಕಾರು ಚಾಲಕ ವೃದ್ಧನಿಗೆ ಗುದ್ದಿದ್ದಲ್ಲದೆ, ಆತನ ಮೇಲೆ ಹರಿಸಿಕೊಂಡು ಹೋಗಿದ್ದಾನೆ. ವೃದ್ಧ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಕಾರು ಚಲಾಯಿಸುತ್ತಿದ್ದ ಯುವಕ ಹಳೇ ದ್ವೇಷ ಇಟ್ಟುಕೊಂಡು ಉದ್ದೇಶಪೂರ್ವಕವಾಗಿಯೇ ಕೃತ್ಯ ಎಸಗಿದ್ದಾನೆ ಎಂದು ವೃದ್ಧ ಆರೋಪಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
01/04/2022 02:08 pm