ಕಲಬುರಗಿ: ಕೆಲ ದುಷ್ಕರ್ಮಿಗಳು ಯುವಕನೊಬ್ಬನ ಬೆನ್ನು, ಎದೆ ಹಾಗೂ ಸೊಂಟದ ಭಾಗದಲ್ಲಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಕಲಬುರಗಿಯ ಎಂಎಸ್ಕೆ ಮಿಲ್ ಪ್ರದೇಶದಲ್ಲಿ ನಡೆದಿದೆ.
ಸೋಹೆಲ್(21) ಕೊಲೆಯಾದ ಯುವಕ. ಸೋಹೆಲ್ ಮೇಲೆ ದಾಳಿ ನಡೆಸಿದ ಹಂತಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಯುವತಿಯ ವಿಚಾರಕ್ಕೆ ಗಲಾಟೆಯಾಗಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಹಂತಕರು ಗಡಿಬಿಡಿಯಲ್ಲಿ ಚಾಕುವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ನಗರದ ಆರ್.ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
01/04/2022 03:09 pm