ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಲಿಸುತ್ತಿದ್ದ ರೈಲಿನಿಂದ ಹಾರಿ ಸಹೋದರಿಯರಿಬ್ಬರ ಆತ್ಮಹತ್ಯೆ

ಮುಂಬೈ: ಸಹೋದರಿಯರಿಬ್ಬರು ಚಲಿಸುತ್ತಿದ್ದ ರೈಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಉರಳ್ ಪೊಲೀಸ್ ಠಾಣಾ ವ್ಯಾಪ್ತಿಯ ಮನಾರ್ಖೇಡ್ ರೈಲು ನಿಲ್ದಾಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಛತ್ತೀಸ್‌ಗಢ ಮೂಲದ ಬೇಬಿ ರಜಪೂತ್ ಮತ್ತು ಪೂಜಾ ಗಿರಿ ಸೋದರಸಂಬಂಧಿಗಳು ಎಂದು ತಿಳಿದುಬಂದಿದೆ. ಮುಂಬೈ-ಕೋಲ್ಕತ್ತಾ ಮಾರ್ಗವಾಗಿ ಹೊರಟಿದ್ದ ರೈಲಿನಿಂದ ಹಾರಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೇಬಿ ಮತ್ತು ಪೂಜಾ ಮನೆಯಲ್ಲಿ ಜಗಳವಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಬುಧವಾರ ರಾತ್ರಿ 9:30ರ ಸುಮಾರಿಗೆ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರಿಬ್ಬರೂ ಸಮವಸ್ತ್ರದಲ್ಲಿದ್ದದ್ದು ಗೊತ್ತಾಗಿದೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಅಕೋಲಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

02/04/2022 07:24 am

Cinque Terre

46.9 K

Cinque Terre

1