ಚಾಮರಾಜನಗರ: ಹುಡುಗಿಯ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ನಡೆದಿದೆ.
ಹೊಸೂರು ಬಡಾವಣೆಯ ಚಿಕ್ಕರಾಜು (30) ಕೊಲೆಯಾದ ದುರ್ದೈವಿ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು, ಹಬ್ಬಕ್ಕೆಂದು ಮನೆಗೆ ಬಂದಿದ್ದಾಗ ಕೊಲೆಯಾಗಿದ್ದಾನೆ. ಚಿಕ್ಕರಾಜು ತಮ್ಮ ವಿನೋದ್ ಎಂಬಾತ ಸೋನಾಕ್ಷಿ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಈ ವಿಚಾರವಾಗಿ ಸೋನಾಕ್ಷಿ ಸಂಬಂಧಿ ವೀರಭದ್ರನಾಯ್ಕ, ಆಕೆಯ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್ ಮತ್ತು ಅಭಿಷೇಕ ಅವರು ಚಿಕ್ಕರಾಜುನನ್ನು ಕೊಲೆ ಗೈದಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
PublicNext
03/04/2022 03:39 pm