ಮುಂಬೈ: ಎಕ್ಸ್ಪ್ರೆಸ್ ರೈಲೊಂದು ಹಳಿ ತಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಮಧ್ಯಾಹ್ಮ 3.10ರ ಸುಮಾರಿಗೆ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್-ಜಯನಗರ ಎಕ್ಸ್ಪ್ರೆಸ್ (11061)ನ ಬೋಗಿಗಳು ಇಲ್ಲಿನ ಲಹವಿತ್ ಮತ್ತು ದೇವಲಾಲಿ ಮಾರ್ಗ ಮಧ್ಯೆ ಹಳಿ ತಪ್ಪಿವೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಮತ್ತು ತಹಶೀಲ್ದಾರ್ ದೌಡಾಯಿಸಿದ್ದು, ಪರಿಹಾರ ಕಾರ್ಯಗಳು ನಡೆಯುತ್ತಿವೆ. ರೈಲು ಹಳಿ ತಪ್ಪಿದ ಕಾರಣ ಈ ಮಾರ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಇತರೆ ರೈಲುಗಳನ್ನು ಬೇರೆ ಮಾರ್ಗಗಳಿಗೆ ತಿರುಗಿಸಲಾಗಿದೆ ಎಂದು ತಿಳಿದುಬಂದಿದೆ.
PublicNext
03/04/2022 08:19 pm