ಚಿಕ್ಕೋಡಿ: ಮಾರಕಾಸ್ತ್ರಗಳಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ನಿಪ್ಪಾಣಿ ಪಟ್ಟಣದಲ್ಲಿ ನಡೆದಿದೆ.
ಅಭಿಷೇಕ ದತ್ತವಾಡೆ (22) ಕೊಲೆಯಾದ ಯುವಕ. ಹಳೆಯ ದ್ವೇಷಕ್ಕಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ನಿರಾಳೆ ಗಲ್ಲಿಯಲ್ಲಿ ನಿನ್ನೆ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅಭಿಷೇಕ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಭೀಬತ್ಸವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ಅಭಿಷೇಕ್ ಚಿತ್ರಮಂದಿರದಲ್ಲಿ ಕೆಲಸ ಮಾಡಿಕೊಂಡಿದ್ದ. ಸ್ಥಳ ಪರಿಶೀಲಿಸಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಕೊಲೆಗಡುಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
PublicNext
04/04/2022 01:42 pm