ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುದ್ಧಿವಾದ ಹೇಳಿದ್ದಕ್ಕೆ ತಮ್ಮನನ್ನೇ ಕೊಲೆಗೈದ ಅಣ್ಣ.!

ಯಾದಗಿರಿ: ಬುದ್ಧಿವಾದ ಹೇಳಿದ್ದಕ್ಕೆ ಪಾಪಿಯೋರ್ವ ತನ್ನ ಸ್ವಂತ ತಮ್ಮನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಗುರುಮಠಕಲ್ ತಾಲೂಕಿನ ಎಂಪಾಡ ಗ್ರಾಮದಲ್ಲಿ ನಡೆದಿದೆ.

ದೇವಿಂದ್ರ (28) ಕೊಲೆಯಾದ ತಮ್ಮ. ಜಯರಾಮ ಕೊಲೆಗೈದ ಆರೋಪಿ. ಜಯರಾಮ್ ಹಾಗೂ ದೇವಿಂದ್ರ ಸಹೋದರರು ಯುಗಾದಿ ಹಬ್ಬದ ಹಿನ್ನೆಲೆ ಊರಿಗೆ ಬಂದಿದ್ದರು. ಭಾನುವಾರ ರಾತ್ರಿ ಇಬ್ಬರು ಸಹೋದರರ ನಡುವೆ ಜಗಳ ಪ್ರಾರಂಭವಾಗಿದೆ. ಈ ವೇಳೆ ದೇವಿಂದ್ರ, ನೀನು ಜಮ್ಲಾನಾಯಕ ಮಕ್ಕಳ ಸಹವಾಸ ಮಾಡಬೇಡ ಎಂದು ಬುದ್ಧಿ ಹೇಳಿದ್ದಾನೆ. ಇದರಿಂದ ಕೋಪಗೊಂಡ ಜಯರಾಮ್, ಕುಟುಂಬಸ್ಥರ ಮುಂದೆಯೇ ತಮ್ಮನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಸಂಬಂಧ ಘಟನಾ ಸ್ಥಳಕ್ಕೆ ಗುರುಮಠಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗೆ ಬಲೆ ಬೀಸಿದ್ದಾರೆ.

Edited By : Vijay Kumar
PublicNext

PublicNext

04/04/2022 03:13 pm

Cinque Terre

43.1 K

Cinque Terre

0