ಭೋಪಾಲ್: 8 ತಿಂಗಳ ಹಿಂದಷ್ಟೇ ಆನ್‌ಲೈನ್‌ನಲ್ಲಿ ಭೇಟಿಯಾದ 14 ವರ್ಷದ ಬಾಲಕಿಯ ಮೇಲೆ 23 ವರ್ಷದ ಯುವಕ 25 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.
ಪೊಲೀಸರು ಅಪ್ರಾಪ್ತ ಬಾಲಕಿಯನ್ನು ಪಾಪಿಯ ಬಂಧನದಿಂದ ರಕ್ಷಣೆ ಮಾಡಿದ್ದು, ಗ್ವಾಲಿಯರ್ ಜಿಲ್ಲಾ ಕೇಂದ್ರದಿಂದ 31 ಕಿ.ಮೀ ದೂರದ ಹಸ್ತಿನಾಪುರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ವರದಿಯ ಪ್ರಕಾರ, ಸಂತ್ರಸ್ತೆ ಸುಂದರ್ ನಗರ ಕಾಶಿಪುರ ಪ್ರದೇಶದ ನಿವಾಸಿಯಾಗಿದ್ದು, 9ನೇ ತರಗತಿಯಲ್ಲಿ ಓದುತ್ತಿದ್ದಳು. ಅವಳು ಮಾರ್ಚ್ 7ರಂದು ತನ್ನ ಸ್ನೇಹಿತನನ್ನು ಭೇಟಿಯಾಗಲು ತನ್ನ ಮನೆ ಬಿಟ್ಟು ಬಂದಿದ್ದಳು. ಬಹಳ ಹೊತ್ತಾದರೂ ಆಕೆ ವಾಪಸ್ ಬಾರದೇ ಇದ್ದಾಗ ಆತಂಕಗೊಂಡ ಸಂತ್ರಸ್ತೆಯ ಕುಟುಂಬಸ್ಥರು ಮುರಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂತ್ರಸ್ತೆಯ ಮೊಬೈಲ್ ಫೋನ್ ಟ್ರ್ಯಾಪ್ ಮಾಡಿ ಹುಡುಕಾಟ ಆರಂಭಿಸಿದರು. ಅದರಂತೆ ಮುರಾರ್ ಸಮೀಪದ ಸಿಂಗ್‌ಪುರ ರಸ್ತೆಯಲ್ಲಿ ಬಾಲಕಿ ಇರುವುದು ಕೊತ್ತಾಗಿತ್ತು. ಬಳಿಕ ಪೊಲೀಸರು ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲು ಆರಂಭಿಸಿದ್ದಾರೆ. ಈ ವೇಳೆ ಅನುಮಾನಾಸ್ಪದ ಬೈಕ್ ಪತ್ತೆಯಾಗಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಬಾಲಕಿ ಇರುವ ಸ್ಥಳವನ್ನು ಪತ್ತೆ ಹಚ್ಚಿ ಆಕೆಯನ್ನು ರಕ್ಷಣೆ ಮಾಡಿದ್ದಾರೆ.
ಎಂಟು ತಿಂಗಳ ಹಿಂದೆ ಸಾಮಾಜಿಕ ಜಾಲತಾಣಗಳ ಮೂಲಕ ಆರೋಪಿಯ ಪರಿಚಯವಾಗಿತ್ತು. ಮಾರ್ಚ್ 7ರಂದು ಭೇಟಿಯಾಗುವಂತೆ ಕರೆ ಮಾಡಿದ್ದ. ನಾನು ಆತ ಹೇಳಿದ ಸ್ಥಳಕ್ಕೆ ಹೋದಾಗ ಬೈಕ್‌ನಲ್ಲಿ ಮನೆಗೆ ಕರೆದುಕೊಂಡು ಹೋಗಿ ಹಸ್ತಿನಾಪುರದಲ್ಲಿರುವ ತನ್ನ ಚಿಕ್ಕಪ್ಪನ ಖಾಲಿ ಮನೆಯಲ್ಲಿಟ್ಟಿದ್ದ. 25 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾಳೆ.
PublicNext
04/04/2022 05:25 pm