ಬೆಂಗಳೂರು: ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಸೇರಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ, ಹಾಗೂ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ 61ಕ್ಕೂ ಹೆಚ್ಚು ಜನರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.
ಪತ್ರ ಮುಖೇನ ಬೆದರಿಕೆ ಹಾಕಿದ್ದು ಆ ಪತ್ರವನ್ನು ಸಾಹಿತಿ ಕುಂ.ವೀರಭ್ರದ್ರಪ್ಪ ಹಂಚಿಕೊಂಡಿದ್ದಾರೆ. ನನಗೆ ಭದ್ರಾವತಿಯಿಂದ ಜೀವ ಬೆದರಿಕೆ ಬಂದಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿಗಳೀರ್ವರ ಹೆಸರುಗಳೂ ಇವೆ. ಹೆಸರು ವಿಳಾಸವಿಲ್ಲದ ಹೇಡಿ ಬರೆದಿರುವ ಪತ್ರ ಇದು. ನೀವು ಓದಿ ಆನಂದಿಸಿ ಎಂದು ತಿಳಿಸಿದ್ದಾರೆ.
ಪತ್ರದಲ್ಲಿ ಕೆಲವು ಅಸಂವಿಧಾನಿಕ ಪದಗಳನ್ನು ಬಳಸಿ ಜೀವ ಬೆದರಿಕೆ ಹಾಕಲಾಗಿದ್ದು, “61+ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕಾಗಿ ಸಿದ್ಧರಾಗಿ. 61+ ದೇಶದ್ರೋಹಿ ಬುದ್ಧಿಜೀವಿಗಳೇ ಕುಂ.ವೀರಭದ್ರಪ್ಪ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರೇ ಸಿದ್ಧರಾಗಿ, ಸಿದ್ಧರಾಗಿ. ನಿಮ್ಮ ನಿಮ್ಮ ಮನೆಯಲ್ಲಿ ನಿಮ್ಮ ಅಂತಿಮ ಶವಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಹೇಳಿ” ಎಂದು ತಿಳಿಸಲಾಗಿದೆ.
“ಹಿಜಾಬ್ ಪರವಾಗಿ, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ನೀವುಗಳು 61 ಸಾಹಿತಿಗಳು ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕುರಿತು…” ಎಂದು ಜೀವ ಬೆದರಿಕೆಗೆ ಕಾರಣ ನೀಡಲಾಗಿದೆ.
PublicNext
08/04/2022 12:07 pm