ಜೈಪುರ: ಸೆಕ್ಸ್ ಗಾಗಿ 19 ವರ್ಷದ ಯುವತಿಗೆ ಆಕೆಯ ಸಹಪಾಠಿಗಳೇ ವಿಷಯುಕ್ತ ಡ್ರಿಂಕ್ಸ್ ನೀಡಿದ ಆಘಾತಕಾರಿ ಘಟನೆ ರಾಜಸ್ಥಾನದ ಭರತ್‌ಪುರದಲ್ಲಿ ನಡೆದಿದೆ. ದುರಾದೃಷ್ಟವಶಾತ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.
ಸದ್ಯ ಸಂತ್ರಸ್ತೆಯ ತಂದೆ ಹಳೇನಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, 'ಭರತ್‌ಪುರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ತಮ್ಮ ಮಗಳ ಐವರು ಸಹಪಾಠಿಗಳು ತಮ್ಮೊಂದಿಗೆ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದರು. ಇದನ್ನು ಯುವತಿ ನಿರಾಕರಿಸುತ್ತಿದ್ದಂತೆ ಆಕೆಯನ್ನು ಅಡ್ಡಗಟ್ಟಿ ವಿಷ ಹಾಕಿದ್ದಾರೆ' ಎಂದು ಹೇಳಿದ್ದಾರೆ.
ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಪ್ರಕರಣದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಳೇ ನಗರದಲ್ಲಿ ಅಜ್ಜ-ಅಜ್ಜಿಯರೊಂದಿಗೆ ವಾಸಿಸುತ್ತಿರುವ ಮಗಳು ತನ್ನ ತಾಯಿಗೆ ಕರೆ ಮಾಡಿ ತನ್ನ ಕಾಲೇಜಿನ ಕೆಲವು ವಿದ್ಯಾರ್ಥಿಗಳು ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸುತ್ತಿರುವುದಾಗಿ ಹೇಳಿಕೊಂಡಿದ್ದಳು ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
PublicNext
08/04/2022 10:32 pm