ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಜರಾತ್: ರಾಮನವಮಿ ಮೆರವಣಿಗೆ ಮೇಲೆ ದಾಳಿ ಕೇಸ್‌- ಆರೋಪಿಗಳು ಅರೆಸ್ಟ್

ಅಹಮದಾಬಾದ್: ಗುಜರಾತ್‌ನ ಹಿಮ್ಮತ್‌ನಗರದಲ್ಲಿ ಭಾನುವಾರ ನಡೆದ ರಾಮನವಮಿ ಮೆರವಣಿಗೆಯ ಮೇಲೆ ದಾಳಿ ನಡೆಸಿ ಎರಡು ಕೋಮುಗಳ ನಡುವೆ ಸಂಘರ್ಷಕ್ಕೆ ಕಾರಣವಾಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹಿಮ್ಮತ್‌ನಗರ ನಗರದ ಛಪಾರಿಯಾ ಪ್ರದೇಶಕ್ಕೆ ಮಧ್ಯಾಹ್ನ ರಾಮನವಮಿ ಮೆರವಣಿಗೆ ತಲುಪಿದಾಗ ಎರಡು ಸಮುದಾಯಗಳ ನಡುವೆ ಘರ್ಷಣೆ ಪ್ರಾರಂಭವಾಗಿತ್ತು. ಈ ವೇಳೆ ಎರಡೂ ಕಡೆಯ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ತಕ್ಷಣವೇ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಆಗಲೂ ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಗರದ ಹೊರಗಿನಿಂದ ಹೆಚ್ಚುವರಿ ಪೊಲೀಸ್ ಪಡೆಯನ್ನು ಕರೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಗುಜರಾತ್ ಪೊಲೀಸರು ಒಟ್ಟು ಹತ್ತು ಜನರನ್ನು ಬಂಧಿಸಿದ್ದಾರೆ.

Edited By : Vijay Kumar
PublicNext

PublicNext

13/04/2022 12:09 pm

Cinque Terre

71.88 K

Cinque Terre

5

ಸಂಬಂಧಿತ ಸುದ್ದಿ