ಕೊಪ್ಪಳ: ವ್ಯಕ್ತಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿದೆ.
ನಿಲೋಗಲ್ ಗ್ರಾಮದ ನಿವಾಸಿ ಸಿದ್ದಲಿಂಗಪ್ಪ (38) ಕೊಲೆಯಾದ ವ್ಯಕ್ತಿ. ಸಿದ್ದಲಿಂಗಪ್ಪ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಇಂದು ಬೆಳ್ಳಂಬೆಳ್ಳಗೆ 4 ಗಂಟೆಗೆ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಯಲಬುರ್ಗಾದ ಮಂಡಲಮರಿ ಕ್ರಾಸ್ ಸಮೀಪ ಹೋಟೆಲ್ವೊಂದರಲ್ಲಿ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದೆ.
ಕೊಲೆ ಮಾಡಿದವರು ಯಾರು ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಯಲಬುರ್ಗಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
13/04/2022 05:31 pm