ಯಾದಗಿರಿ: ಸಾಲಾಬಾಧೆ ತಾಳಲಾರದೇ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಬೈಲಾಪುರ ಗ್ರಾಮದಲ್ಲಿ ನಡೆದಿದೆ.
ಬಾಲದಂಡಪ್ಪ ತಂದೆ ಹನುಮಂತರಾಯ (42) ಮೃತಪಟ್ಟ ವ್ಯಕ್ತಿ. ಬೈಲಾಪುರ ಗ್ರಾಮದಲ್ಲಿರೋ ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ಬ್ಯಾಂಕ್ ಹಾಗೂ ಕೈ ಸಾಲ ಸೇರಿ 6 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ ಬಾಲದಂಡಪ್ಪ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ವಿಷಯ ತಿಳಿದ ಕುಟುಂಬಸ್ಥರು ಹುಣಸಗಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬಾಲದಂಡಪ್ಪ ಮೃತಪಟ್ಟಿದ್ದಾರೆ. ಈ ಘಟನೆ ಹುಣಸಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
PublicNext
13/04/2022 07:27 pm