ನವದೆಹಲಿ: ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದ ರೆಸ್ಟೋರೆಂಟ್ ಕಮ್-ಬಾರ್‌ನಲ್ಲಿ ಗುರುವಾರ ಮಧ್ಯಾಹ್ನ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್, 'ಪಂಜಾಬಿ ಬಾಗ್‌ನ ಕ್ಲಬ್ ರಸ್ತೆಯಲ್ಲಿರುವ ಟ್ರಾಯ್ ಲಾಂಜ್ ಮತ್ತು ಬಾರ್‌ನಲ್ಲಿ ಮಧ್ಯಾಹ್ನ 1:35ಕ್ಕೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಕರೆ ಬಂದಿತ್ತು. ತಕ್ಷಣವೇ ಮೂರು ಅಗ್ನಿಶಾಮಕ ಟೆಂಡರ್‌ಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿ, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬೆಂಕಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಒಂಬತ್ತು ಅಗ್ನಿಶಾಮಕ ಟೆಂಡರ್‌ಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿ ನಂದಿಸುವ ಕಾರ್ಯಾಚರಣೆಗಳು ನಡೆಯುತ್ತಿದ್ದು, ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.
PublicNext
14/04/2022 04:07 pm